ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಅಹ್ವಾನ । Free Sewing Machine Scheme 2025


ಹಿಂದುಳಿದ ವರ್ಗಗಳ ಬಡ ಕುಟುಂಬದವರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಯೋಜನೆಯಲ್ಲಿ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.


ಅರ್ಜಿ ಸಲ್ಲಿಸಲು ಅರ್ಹತೆ :-

ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳ ಒಳಗಿರಬೇಕು,

ವಯೋಮಿತಿ ವಿವರ :-

ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.

ಅರ್ಜಿ ಸಲ್ಲಿಸಲು ಅರ್ಹ ಸಮುದಾಯದವರು :-

ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :-

ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.

ವಿಶೇಷ ಸೂಚನೆ :-

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
2023-24 ಮತ್ತು 2024-25ನೇ ಸಾಲಿನಲ್ಲಿ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಅರ್ಜಿ ಸಲ್ಲಿಸುವ ಸ್ಥಳ :-

ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ :-

ನಿಗಮದ ವೆಬ್‌ಸೈಟ್ www.dbeds.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿರುತ್ತದೆ ಅಥವಾ ನಿಗಮದ 8050770004 5 8050770005 ದೂರವಾಣಿ ಸಂಖ್ಯೆಗಳನ್ನು ವೆಬ್‌ಸೈಟ್‌ನಲ್ಲಿ ನೀಡಲಾಗಿದ್ದು ಅದರಂತೆ ಸಂಪರ್ಕಿಸಬಹುದು.


ಇದನ್ನು ಓದಿರಿ :- ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್‌..?

Leave a Comment