Bele Sala Manna : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ರೈತರ ಬೆಳೆ ಸಾಲ ಮನ್ನಾ ಮತ್ತು ಬೆಳೆ ಹಾನಿ ಪರಿಹಾರದ ಬಗ್ಗೆ ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ 2025 ಸೆಪ್ಟೆಂಬರ್ ತಿಂಗಳಲ್ಲಿ ನಡೆದ ಅತಿವೃಷ್ಟಿಯಿಂದ ಉಂಟಾದ ವ್ಯಾಪಕ ಬೆಳೆ ಹಾನಿಯನ್ನು ಪರಿಗಣಿಸಿ ರೈತರ ಸಂಕಷ್ಟವನ್ನು ಪರಿಹರಿಸಲು ರಾಜ್ಯ ಸರ್ಕಾರ ಯಾವುದೇ ಸಂದರ್ಭದಲ್ಲಿ ತಯಾರಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ ಇದರ ಬಗ್ಗೆ ಈ ಕೆಳಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದೆ.
ಬೆಳೆ ಸಾಲ ಮನ್ನಾದ ಉದ್ದೇಶ
ರೈತರು ಇತ್ತೀಚಿನ ವರ್ಷಗಳಲ್ಲಿ ಆರ್ಥಿಕವಾಗಿ ಸಾಕಷ್ಟು ದುರ್ಬಲರಾಗಿದ್ದಾರೆ ಅದರ ಜೊತೆಗೆ ಪ್ರಕೃತಿ ವಿಕೋಪ ಸೇರಿದಂತೆ ಇನ್ನಿತರ ಕಾರಣಗಳಿಂದಾಗಿ ರೈತರು ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ ಹಾಗಾಗಿ ತಾವು ಬೆಳೆದ ಬೆಳೆಗೆ ಸೂಕ್ತವಾದ ಬೆಲೆ ಕೂಡ ಸಿಗುತ್ತಿಲ್ಲ ರೈತರು ಸಾಕಷ್ಟು ಬೆಳೆ ಸಾಲವನ್ನು ಮಾಡಿಕೊಂಡಿದ್ದಾರೆ ಇದನ್ನು ಮನ್ನಾ ಮಾಡುವುದಕ್ಕೆ ಸಿಎಂ ಸಿದ್ದರಾಮಯ್ಯ ಭರವಸೆಯನ್ನು ನೀಡಿದ್ದಾರೆ.
ಜಂಟಿ ಸಮೀಕ್ಷೆ ಮತ್ತು ಪರಿಹಾರ
ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಬೆಳೆ ಹಾನಿಯ ಮೌಲ್ಯಮಾಪನ ಮಾಡಲು ಕಂದಾಯ ಮತ್ತು ಕೃಷಿ ಇಲಾಖೆಗಳ ಜಂಟಿ ಸರ್ವೆಯನ್ನು ನಡೆಸಿ ನಿರ್ದೇಶನವನ್ನ ನೀಡಲು ಕೋರಿದ್ದಾರೆ ಈ ಸಮೀಕ್ಷೆ ವರದಿ ಬಂದ ನಂತರ ಇದರ ಆಧಾರದ ಮೇಲೆ ರೈತರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಈ ಸಂದರ್ಭದಲ್ಲಿ ಹೇಳಿದ್ದಾರೆ.
ಪರಿಹಾರ ವಿತರಣೆ
ಸಮೀಕ್ಷೆ ಪೂರ್ಣಗೊಂಡ ನಂತರ ರೈತರಿಗೆ ಸೂಕ್ತ ಪರಿಹಾರ ವಿತರಣೆ ಮಾಡಲಾಗುವುದೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಇದರ ಜೊತೆಗೆ ಮುಖ್ಯಮಂತ್ರಿಗಳು ನಿಧಿಯ ಕೊರತೆ ಇಲ್ಲ ಆರ್ಥಿಕ ಸಂಕಷ್ಟ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರೈತರಿಗೆ ಸಲಹೆಗಳು
ಅಧಿಕಾರಿಗಳು ಜಂಟಿ ಸರ್ವೆ ನಡೆಸುವ ಸಮಯದಲ್ಲಿ ಸಹಕರಿಸಬೇಕಾಗಿ ರೈತರ ಬಳಿ ಕೋರಲಾಗಿದೆ ನಂತರ ಸೂಕ್ತವಾದ ಬೆಳೆ ಹಾನಿಯ ದಾಖಲೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕು ಭೂಮಿಯ ದಾಖಲೆಗಳನ್ನ ಅಧಿಕಾರಿಗಳು ಕೇಳಿದ ತಕ್ಷಣ ನೀಡಬೇಕು ಎಂದು ಹೇಳಿದ್ದಾರೆ
ಬೆಳೆ ಹಾನಿಗೆ ಅರ್ಜಿ ಸಲ್ಲಿಸಲು ಈ ಕೆಳಗೆ ಲಿಂಕ್ ಮೇಲೆ ಕ್ಲಿಕ್ ಮಾಡಿ
ತೀರ್ಮಾನ
ರಾಜ್ಯ ಸರ್ಕಾರವು ರೈತರ ಸಂಕಷ್ಟಗಳನ್ನು ಪರಿಹರಿಸಲು ಯಾವುದೇ ಸಮಯದಲ್ಲಿ ಸಿದ್ಧವಿದ್ದೇವೆ ಎಂದು ಹೇಳಿದ್ದಾರೆ ಜಂಟಿ ಸಮೀಕ್ಷೆಯ ವರದಿ ಆಧಾರದ ಮೇಲೆ ರೈತರಿಗೆ ಪರಿಹಾರ ನೀಡಲಾಗುವುದು ಮತ್ತು ಸಾಲ ಮನ್ನದ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯನವರು ರೈತರಿಗೆ ಭರವಸೆಯನ್ನು ಕೊಟ್ಟಿದ್ದಾರೆ.